Get flat 10% off on Wonderla Entry Tickets | Use coupon code "BTWONDER".
Heavy Rain: ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಘೋರ ದುರಂತ: ಹಾವೇರಿಯಲ್ಲಿ ಮನೆಯ ಗೋಡೆ ಕುಸಿದು ಮೂವರ ಸಾವು
Heavy Rain: ಕರ್ನಾಟಕ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಹಲವು ಅವಘಡಗಳು ಸಂಭವಿಸುತ್ತಿವೆ. ಜನಜೀವನ ಅಸ್ತವ್ಯಸ್ತವಾಗಿದೆ. ಸತತ ಮಳೆಯಿಂದಾಗಿ ಮನೆಯೊಂದರ ಮೇಲ್ಛಾವಣಿ ಕುಸಿದು ಮೂವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
Haveri: ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗಿನ ಜಾವ 3:30ರ ಸುಮಾರಿಗೆ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಅವಘಡ ಸಂಭವಿಸಿದೆ. ಮನೆಯಲ್ಲಿ ಒಟ್ಟು 6 ಮಂದಿ ವಾಸವಿದ್ದರು. ಇವರಲ್ಲಿ ಚೆನ್ನಮ್ಮ (30) ಹಾಗೂ ಒಂದು ವರ್ಷದ ಅವಳಿ ಮಕ್ಕಳಾದ ಅನುಶ್ರೀ ಮತ್ತು ಅಮೂಲ್ಯ ಮೃತಪಟ್ಟಿದ್ದು, ವೃದ್ಧೆ ಯಲ್ಲಮ್ಮ ಮತ್ತು ಆಕೆಯ ಮಗ ಮತ್ತು ಸೊಸೆ ಸವಣೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹುಲಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸ್ಥಳಕ್ಕೆ ಸವಣೂರು ಎಸಿ ಮಹಮ್ಮದ್ ಅಜೀಜ್ ಭೇಟಿ ನೀಡಿ ಮೇಲ್ಛಾವಣಿ ಹಾಗೂ ಪರಿಸ್ಥಿತಿಯನ್ನು ಪರಿಶೀಲಿಸಿದರು. ಸ್ಥಳಕ್ಕೆ ಮಾಜಿ ಶಾಸಕ ಅಜ್ಜಂಪೀರ ಖಾದ್ರಿ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಇದನ್ನೂ ಓದಿ: ಹಳೆ ಐರಾವತ ಬಸ್‌ಗಳಿಗೆ KSRTC ಈಗ ಹೊಸ ರೂಪ ನೀಡಲಿದೆ!
ಮೈಸೂರು ಜಿಲ್ಲೆಯಾದ್ಯಂತ ಧಾರಾಕಾರ ಮಳೆ:
ಮೈಸೂರು ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದೆ. ಧಾರಾಕಾರ ಮಳೆ ಸುರಿಯುತ್ತಿರುವ ಎಲ್ಲ 9 ವಲಯಗಳ ಎಲ್ಲ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. 9 ತಾಲೂಕುಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ. ಈಗಾಗಲೇ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡಗಳಿದ್ದರೆ ಬೇರೆಡೆಗೆ ಸ್ಥಳಾಂತರಿಸಿ ತರಗತಿ ನಡೆಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಭಾರಿ ಮಳೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು.
Latest Trending
- ನೈಸ್ ರಸ್ತೆಗಳಲ್ಲಿ ಅತಿವೇಗ ಮತ್ತು ಟ್ರಾಫಿಕ್ ಉಲ್ಲಂಘನೆಯನ್ನು ತಡೆಗಟ್ಟಲು ರಾಡಾರ್ ಎಂಬೆಡೆಡ್ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ!
- ವರ್ಷಾಂತ್ಯದ ವೇಳೆಗೆ ನಮ್ಮ ಮೆಟ್ರೋನ ಹಳದಿ ಮಾರ್ಗದಲ್ಲಿ ಚಾಲಕ ರಹಿತ ಮೆಟ್ರೋ ಸೇವೆ ಆರಂಭ!
- ಮೈಸೂರಿಗರೇ ಎಚ್ಚರ ನಗರದಲ್ಲಿ 250 ಹೊಸ AI ಕ್ಯಾಮೆರಾ ಅಳವಡಿಕೆ, ನಿಯಮ ಉಲ್ಲಂಘನೆ ಮಾಡಿದರೆ ಬೀಳಲಿದೆ ದಂಡ
- ಬೆಂಗಳೂರಿನಿಂದ – ಜೋಗ್ ಫಾಲ್ಸ್ ಗೆ ಟೂರ್ ಪ್ಯಾಕೇಜ್ ಪ್ರಾರಂಭಿಸಿದ KSRTC: ವಿವರ ಇಲ್ಲಿದೆ
Follow us on Instagram Bangalore Today