Get flat 10% off on Wonderla Entry Tickets | Use coupon code "BTWONDER".
Crop Compensation: ರಾಜ್ಯದ ರೈತರಿಗೆ ಗುಡ್ ನ್ಯೂಸ್, ₹2 ಸಾವಿರ ಬೆಳೆ ಪರಿಹಾರ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ
Crop Compensation: ರಾಜ್ಯದ ರೈತರು ಈಗಾಗಲೇ ಈ ಬಾರಿ ಭೀಕರ ಬರಗಾಲ ಎದುರಿಸುತ್ತಿದ್ದು, ರಾಜ್ಯದ ಒಟ್ಟು 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು, ಕೇಂದ್ರ ಸರ್ಕಾರದಿಂದ ಬರ ಪರಿಹಾರ ಹಣ ಇಲ್ಲಿಯವರೆಗೆ ಬಿಡುಗಡೆಯಾಗಿಲ್ಲ, ಹಾಗಾಗಿ ರಾಜ್ಯದ ರೈತರಿಗೆ 2000 ರೂ.ಗಳನ್ನು ಬೆಳೆ ಪರಿಹಾರ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ.
ಬೆಂಗಳೂರು ಡಿಸೆಂಬರ್ 01: ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ನಡೆದ ತುರ್ತು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬರ ಪರಿಹಾರ ಕುರಿತು ಕೇಂದ್ರ ಗೃಹ ಸಚಿವರ ನೇತೃತ್ವದಲ್ಲಿ ಇದುವರೆಗೆ ಉನ್ನತ ಮಟ್ಟದ ಸಭೆ ನಡೆಸಿಲ್ಲ, ಪರಿಹಾರ ನೀಡಿಲ್ಲ.
ಹಾಗಾಗಿ ಕೇಂದ್ರ ಸರ್ಕಾರದ ಪರಿಹಾರ ಬಿಡುಗಡೆಯಾಗುವವರೆಗೆ ಬೆಳೆ ನಷ್ಟ ಅನುಭವಿಸುತ್ತಿರುವ ರಾಜ್ಯದ ರೈತರಿಗೆ ಎರಡು ಸಾವಿರ ರೂಪಾಯಿ ಪರಿಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಈ ಹಣವನ್ನು ರೈತರ ಖಾತೆಗೆ ಮೊದಲ ಕಂತಿನ ರೂಪದಲ್ಲಿ ವರ್ಗಾಯಿಸಲಾಗುವುದು ಅವರು ಹೇಳಿದರು.
ಇದನ್ನೂ ಓದಿ; ಕಾಡು ಪ್ರಾಣಿಗಳಿಂದ ಬೆಳೆಗಳನ್ನು ರಕ್ಷಿಸುವ ‘ಫಾರ್ಮ್ ಗಾರ್ಡ್’ ಉಪಕರಣ
ಈ ಬಾರಿ ರಾಜ್ಯದ 223 ತಾಲೂಕುಗಳು ಬರಕ್ಕೆ ತುತ್ತಾಗಿವೆ!
ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದ ರಾಜ್ಯದ ರೈತರು ಭೀಕರ ಬರಗಾಲ ಎದುರಿಸುತ್ತಿದ್ದು, ರಾಜ್ಯದ 236 ತಾಲೂಕುಗಳ ಪೈಕಿ 223 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದ್ದು, 48.19 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ 33,770.10 ಕೋಟಿ ರೂ ಬೆಳೆ ಬರದಿಂದಾಗಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಆದ್ದರಿಂದ ಕೇಂದ್ರಕ್ಕೆ 18,171.44 ಕೋಟಿ ರೂ ಆರ್ಥಿಕ ನೆರವು ನೀಡುವಂತೆ ರಾಜ್ಯ ಸರ್ಕಾರವು ಸೆಪ್ಟೆಂಬರ್ 21 ರಂದು ಕೇಂದ್ರ ಸರ್ಕಾರಕ್ಕೆ ಮೊದಲ ಮನವಿ ಮಾಡಿದೆ. ಅಕ್ಟೋಬರ್ ನಲ್ಲಿ ಕೇಂದ್ರದಿಂದ ಬಂದ ತಂಡ ಬರ ಅಧ್ಯಯನ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ, ಅದರ ಯಾವುದೇ ಆರ್ಥಿಕ ನೆರವು ಕೇಂದ್ರದಿಂದ ಬಂದಿಲ್ಲ ಎಂದರು.
ಕೃಷಿ ವಿಮೆ 460 ಕೋಟಿ ರೂಪಾಯಿ ಬಿಡುಗಡೆ!
ಬಿತ್ತನೆ ವೈಫಲ್ಯ ಮತ್ತು ಮಧ್ಯಂತರ ವಿಮೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರದಿಂದ ಈಗಾಗಲೇ 460 ಕೋಟಿ ಬಿಡುಗಡೆ ಮಾಡಲಾಗಿದ್ದು, ಇದರಿಂದ 6.5 ಲಕ್ಷ ರೈತರಿಗೆ ಅನುಕೂಲವಾಗಲಿದೆ, ಇದನ್ನು ಹೊರತುಪಡಿಸಿ ಕುಡಿಯುವ ನೀರು, ಮೇವು ಮತ್ತು ಉದ್ಯೋಗಾವಕಾಶಕ್ಕಾಗಿ 327 ಕೋಟಿ ಬಿಡುಗಡೆ ಮಾಡಲಾಗಿದೆ, ಇದನ್ನು ಹೊರತುಪಡಿಸಿ 780 ಕೋಟಿ ರೂ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಇರಿಸಲಾಗಿದ್ದು,
ಜಿಲ್ಲಾಧಿಕಾರಿಗಳ ಮೂಲಕ ತಹಸೀಲ್ದಾರರಿಗೆ ಬಿಡುಗಡೆ ಮಾಡಲಾಗಿದೆ. ರಾಜ್ಯದ ಯಾವುದೇ ತಾಲ್ಲೂಕಿನಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಲು ನಾವು ಯಶಸ್ವಿಯಾಗಿದ್ದೇವೆ ಮತ್ತು ಹಲವಾರು ತಾಲ್ಲೂಕುಗಳ 60 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಟ್ಯಾಂಕರ್ ನೀರಿನ ವ್ಯವಸ್ಥೆಯನ್ನು ಸಹ ಮಾಡಲಾಗಿದೆ”, ಎಂದು ಅವರು ಹೇಳಿದರು.
Latest Trending
- ಕರ್ನಾಟಕಕ್ಕೆ ಚೀನಾ ಮೂಲದ ಎಚ್9ಎನ್2 ವೈರಸ್ ಭೀತಿ!
- ಚಿನ್ನ & ಬೆಳ್ಳಿ ದರ ಎಷ್ಟಿದೆ ನೋಡಿ!
- ನಮ್ಮ ಮೆಟ್ರೋಗೆ ಬಿಬಿಎಂಪಿ ಸೇವಾ ಶುಲ್ಕದ ಹೊರೆ: ಮೆಟ್ರೋ ಟಿಕೆಟ್ ದರ ಹೆಚ್ಚಳ ಸಾಧ್ಯತೆ!
- ದಿನಕ್ಕೆ ಒಂದು ಸೇಬು ತಿನ್ನುವುದರಿಂದ ಆಗುವ ಪ್ರಯೋಜನಗಳು,
Follow us on Instagram Bangalore Today