Get flat 10% off on Wonderla Entry Tickets | Use coupon code "BTWONDER".
Leopard Rescue Operation: ಚಿರತೆ ಬೋನಿನಲ್ಲಿ ಸೆರೆ, ಹುಲಿಗಾಗಿ ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ!
Leopard Rescue Operation: ಮೈಸೂರು ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ವನ್ಯಪ್ರಾಣಿಗಳ ಹಾವಳಿ ಹೆಚ್ಚಾಗಿ ರೈತರಲ್ಲಿ ಆತಂಕ ಮೂಡಿಸಿದ್ದು, ಅದೇ ರೀತಿ ಕಬ್ಬಿನ ಗದ್ದೆಯಲ್ಲಿ ಮೂರು ಮರಿಗಳೊಂದಿಗೆ ತಾಯಿ ಚಿರತೆಯನ್ನು ಹಿಡಿಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ.
Mysore, 08: ಮೈಸೂರಿನ ಆಯಾರಹಳ್ಳಿ ಗ್ರಾಮದಲ್ಲಿ ರೈತನು ತನ್ನ ಗದ್ದೆಯಲ್ಲಿ ಕಟಾವು ಹಂತಕ್ಕೆ ಬಂದಿರುವಂತಹ ಕಬ್ಬಿನ ಕಟಾವು ಸಂದರ್ಭದಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿದ್ದು ಈ ಕುರಿತು ಅರಣ್ಯ ಅಧಿಕಾರಿಗಳಿಗೆ ಮಾಹಿತಿಯನ್ನು ತಿಳಿಸಿದ್ದಾರೆ ಹಾಗೂ ಚಿರತೆ ಸೆರೆ ಹಿಡಿಯಲು ಮುಂದಾದ ಅರಣ್ಯ ಇಲಾಖೆ ಅಧಿಕಾರಿಗಳು ಗದ್ದೆಯಲ್ಲಿ ಬೋನನ್ನು ಇಟ್ಟಿದ್ದರು ಹಾಗೂ ತಾಯಿ ಚಿರತೆ ಬೋನಿನಲ್ಲಿ ಸಿಲುಕಿಕೊಂಡಿದೆ ಹಾಗೂ ಚಿರತೆ ಸೆರೆ ಕಾರ್ಯಾಚರಣೆಯಲ್ಲಿ ಅರಣ್ಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ: ಚಿನ್ನದ ದರದಲ್ಲಿ ಮತ್ತೆ ಏರಿಕೆ! ಇಂದಿನ ದರ ಎಷ್ಟಿದೆ ನೋಡಿ!
ಮತ್ತೊಂದೆಡೆ ಹುಲಿ ಪ್ರತ್ಯಕ್ಷ!
ಮೈಸೂರು ಜಿಲ್ಲೆಯ ಹುಣಸೂರು ಭಾಗದ ಶೆಟ್ಟಹಳ್ಳಿ ಹಾಗೂ ಲೆಕ್ಕ ಪಟ್ಟಣದ ಪ್ರದೇಶದಲ್ಲಿ ಹುಲಿ ಕಾಣಿಸಿಕೊಂಡಿದೆ. ನಾಗರಹೊಳೆ ಉದ್ಯಾನವನದ ಅಂಚಿನಲ್ಲಿರುವ ನೆಗತ್ತೂರು ಮತ್ತು ಶೆಟ್ಟಹಳ್ಳಿ ಲಕ್ಕಪಟ್ಟಣ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡಿದೆ. ಹೀಗಾಗಿ ಅರಣ್ಯ ಇಲಾಖೆ ಗುರುವಾರ ಆನೆಗಳ ಮೂಲಕ ಕೂಂಬಿಂಗ್ ನಡೆಸಿದ್ದರೂ ಹುಲಿ ಮಾತ್ರ ಪತ್ತೆಯಾಗಿಲ್ಲ.
Courtesy: Udayavani
ನೆಗತ್ತೂರು ಗ್ರಾಮದ ಲಕ್ಷ್ಮಮ್ಮ ಎಂಬ ಮಹಿಳೆಗೆ ಸೇರಿದ ಎರಡು ಹಸುಗಳನ್ನು ಕೊಂದ ಹುಲಿ ಪತ್ತೆಗೆ ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ಕೂಂಬಿಂಗ್ ನಡೆಸಿದ್ದರು.
ದಯಾನಂದ ಅವರ ಮಾರ್ಗದರ್ಶನದಲ್ಲಿ ಆರ್ಯಪ್ಪೋ ಸುಬ್ರಹ್ಮಣ್ಯ ಅವರ ನೇತೃತ್ವದಲ್ಲಿ ಸಖಾನರಾದ ಗಣೇಶ್ ಶ್ರೀರಂಗ, ಸಿದ್ದರಾಜು ವೀರಭದ್ರಯ್ಯ ಹಾಗೂ ಸಿಬ್ಬಂದಿ ಹಾಗೂ ಆರ್‌ಆರ್‌ಟಿ ಸಿಬ್ಬಂದಿಗಳ ಸಹಕಾರದೊಂದಿಗೆ ಹುಲಿ ಸೆರೆ ಕಾರ್ಯಾಚರಣೆ ನಡೆಸಲಾಯಿತು.
ಇದನ್ನೂ ಓದಿ: ರೈತರಿಗೆ ಸಂತಸದ ಸುದ್ದಿ, ಮುಂದಿನ 1 ವಾರದಲ್ಲಿ ರೈತರ ಖಾತೆಗೆ ಮೊದಲ ಕಂತಿನ ಬೆಳೆ ಪರಿಹಾರ
ಹುಲಿಯನ್ನು ಹಿಡಿಯುವಂತೆ ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರು ಒತ್ತಾಯಿಸಿದ್ದು, ಈ ಭಾಗದ ಜನರು ಭಯಭೀತರಾಗಿ ಸಂಚರಿಸುತ್ತಿದ್ದು, ಅನಾಹುತ ಸಂಭವಿಸುವ ಮುನ್ನ ಹುಲಿಯನ್ನು ಸೆರೆ ಹಿಡಿಯಬೇಕು, ಇಲ್ಲವಾದಲ್ಲಿ ಹನಗೋಡ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
Latest Trending
- ಕಾಡು ಪ್ರಾಣಿಗಳಿಂದ ಬೆಳೆಗಳನ್ನು ರಕ್ಷಿಸುವ ‘ಫಾರ್ಮ್ ಗಾರ್ಡ್’ ಉಪಕರಣ
- ನಮ್ಮ ಮೆಟ್ರೋಗೆ ಬಿಬಿಎಂಪಿ ಸೇವಾ ಶುಲ್ಕದ ಹೊರೆ: ಮೆಟ್ರೋ ಟಿಕೆಟ್ ದರ ಹೆಚ್ಚಳ ಸಾಧ್ಯತೆ!
Follow us on Instagram Bangalore Today Bangalore Today