Diwali Special Bus: KSRTC ನಿಂದ ದೀಪಾವಳಿ ಹಬ್ಬಕ್ಕೆ ಹೆಚ್ಚುವರಿ 2000 ಬಸ್ ವ್ಯವಸ್ಥೆ

Diwali Special Bus: ದೀಪಾವಳಿ ಅಥವಾ ಇತರೆ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗೆ ಹೆಚ್ಚುವರಿ ಬಸ್ ಸೇವೆ ಒದಗಿಸುವುದು ಕೆಎಸ್ ಆರ್ ಟಿಸಿಯ ಜವಾಬ್ದಾರಿಯಾಗಿರುತ್ತದೆ , ಹೀಗಾಗಿ ಬೆಂಗಳೂರಿನಿಂದ ನಾನಾ ಊರು, ರಾಜ್ಯಗಳಿಗೆ ಜನರು ಹೆಚ್ಚಾಗಿ ಸಂಚರಿಸುವುದರಿಂದ ಅವರ ಅನುಕೂಲಕ್ಕಾಗಿ ನ.10ರಿಂದ 12ರವರೆಗೆ ಈ ಸೇವೆ ಲಭ್ಯವಾಗಲಿದೆ.

Diwali Special Bus

Bangalore, November, 05: ಹಬ್ಬದ ಸಂದರ್ಭದಲ್ಲಿ ನಗರದಲ್ಲಿ ನೆಲೆಸಿರುವ ವಿವಿಧ ಜಿಲ್ಲೆ ಹಾಗೂ ರಾಜ್ಯಗಳ ಜನರು ದೀಪಾವಳಿ ಹಬ್ಬ ಆಚರಿಸಲು ತಮ್ಮ ತಮ್ಮ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ಕೆಎಸ್‌ಆರ್‌ಟಿಸಿ ಸಾರಿಗೆ ಇಲಾಖೆ ನ.10ರಿಂದ 12ರವರೆಗೆ ವಿವಿಧ ಸ್ಥಳಗಳಿಗೆ ಎರಡು ಸಾವಿರ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿದೆ.

ಇದಲ್ಲದೇ ನ.14 ಮತ್ತು 15ರಂದು ರಾಜ್ಯದ ವಿವಿಧೆಡೆಯಿಂದ ಬೆಂಗಳೂರಿಗೆ ವಿಶೇಷ ಬಸ್ ಗಳು ಕೂಡ ಸಂಚರಿಸಲಿವೆ ಎಂದು ಕೆಎಸ್ ಆರ್ ಟಿಸಿ ಮಾಹಿತಿ ನೀಡಿದೆ.

ಇದನ್ನೂ ಓದಿ; ಬೆಂಗಳೂರಿನಲ್ಲಿ ಮೊದಲ ಬಾರಿ ಕಂಬಳ ಕ್ರೀಡೆ! ಇಲ್ಲಿದೆ ವಿವರ

ಬೆಂಗಳೂರಿನಿಂದ ಯಾವ ಯಾವ ಸ್ಥಳಗಳಿಗೆ ಬಸ್​ ವ್ಯವಸ್ಥೆ!

ಬೆಂಗಳೂರಿನಿಂದ ವಿಶೇಷವಾಗಿ ರಾಜ್ಯದ ಪ್ರಮುಖ ಸ್ಥಳಗಳಾದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ಬೀದರ್, ಪಟ್ಟಿ ಅಂತಹ ಸ್ಥಳಗಳಿಗೆ ಹೈದರಾಬಾದ್ ವಿಶೇಷ ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ ಮತ್ತು ಪ್ರಯಾಣಿಕರು ಕೆಂಪೇಗೌಡ ಬಸ್ ನಿಲ್ದಾಣದಿಂದ ಈ ಸೇವೆಯನ್ನು ಪಡೆಯಬಹುದು.

ಮುಂಗಡ ಟಿಕೆಟ್ ಬುಕಿಂಗ್ ಲಭ್ಯ!

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈಗಾಗಲೇ ಕೆಎಸ್ ಆರ್ ಟಿಸಿ ಮುಂಗಡ ಟಿಕೆಟ್ ಬುಕ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದ್ದು, ಹಬ್ಬಕ್ಕೆಂದು ನಗರಕ್ಕೆ ತೆರಳುವ ಪ್ರಯಾಣಿಕರಿಗೆ ಸಾರಿಗೆ ಸಮಸ್ಯೆ ಎದುರಾಗದಂತೆ ಮುಂಗಡ ಟಿಕೆಟ್ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ ಮತ್ತು ಬಸ್ ನಿಲ್ದಾಣಗಳಿಗೆ ತೆರಳುವ ಮೊದಲು ಪ್ರಯಾಣಿಕರು ಬಸ್ ನಿಲ್ದಾಣದ ಹೆಸರು ಮತ್ತು ಮುಂಗಡ ಕಾಯ್ದಿರಿಸಿದ ಟಿಕೆಟ್‌ಗಳಲ್ಲಿ ನಮೂದಿಸಲಾದ ಪಿಕ್-ಅಪ್ ಪಾಯಿಂಟ್ ಅನ್ನು ಗಮನಿಸಲು ವಿನಂತಿಸಲಾಗಿದೆ.

ಮುಂಗಡ ಟಿಕೆಟ್ ಶೇಕಡಾ 5 ರಷ್ಟು ರಿಯಾಯಿತಿ!

ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಿಗೆ ಮುಂಗಡ ಟಿಕೆಟ್ ಕಾಯ್ದಿರಿಸಿದರೆ ಶೇಕಡಾ 5 ರಷ್ಟು ರಿಯಾಯಿತಿ ಮತ್ತು ರಿಟರ್ನ್ ಟಿಕೆಟ್ ಅನ್ನು ಒಟ್ಟಿಗೆ ಬುಕ್ ಮಾಡಿದರೆ ರಿಟರ್ನ್ ದರದಲ್ಲಿ ಶೇಕಡಾ 10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ನಿಗಮ ತಿಳಿಸಿದೆ.

Latest Trending

Follow us on Instagram Bangalore Today

Leave a Reply

Your email address will not be published. Required fields are marked *