ATM Robbery in Bangalore: ಕಳ್ಳರು ATM ನಿಂದ ಹಣ ದೋಚಲು ಯತ್ನಿಸಿದ್ದು, ಸಾವಿರಾರು ರೂಪಾಯಿ ಸುಟ್ಟು ಕರಕಲಾಗಿದೆ

ATM Robbery in Bangalore: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ತಡರಾತ್ರಿ ಎಟಿಎಂ ದರೋಡೆಗೆ ಯತ್ನಿಸಿದ ಘಟನೆ ನಡೆದಿದೆ. ಕಳ್ಳರು ಎಟಿಎಂ ಯಂತ್ರವನ್ನು ಕಟರ್‌ನಿಂದ ಕತ್ತರಿಸುತ್ತಿದ್ದಾಗ ಅನಿರೀಕ್ಷಿತವಾಗಿ ಬೆಂಕಿ ಹೊತ್ತಿಕೊಂಡಿದೆ.

ATM Robbery in Bangalore

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ಎಟಿಎಂ ಕಳವು ಯತ್ನ ನಡೆದಿದ್ದು, ಮುಂಬೈ ಆಕ್ಸಿಸ್ ಬ್ಯಾಂಕ್ ಅಧಿಕಾರಿಗಳಿಂದ ಮಾಹಿತಿ ಪಡೆದ ಕಟ್ಟಡದ ಮಾಲೀಕರು ಸ್ಥಳಕ್ಕೆ ತೆರಳಿದಾಗ ಕಳ್ಳರು ಅಲ್ಲಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ; ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಲಿದೆ; ಹವಾಮಾನ ಇಲಾಖೆ ವರದಿ

ಮಧ್ಯರಾತ್ರಿ 1:50ರ ಸುಮಾರಿಗೆ ನೆಲಮಂಗಲ ಟೌನ್ ಬಳಿ ಎಟಿಎಂಗೆ ಕಟರ್ ನಿಂದ ಕಟ್ ಮಾಡಲು ಯತ್ನಿಸಿದ್ದಾರೆ. ಈ ವಿಷಯ ತಿಳಿದ ಕೂಡಲೇ ಮುಂಬೈನ ಆಕ್ಸಿಸ್ ಬ್ಯಾಂಕ್ ಅಧಿಕಾರಿಗಳು ಕಟ್ಟಡದ ಮಾಲೀಕರಿಗೆ ಕರೆ ಮಾಡಿ, ಮಾಲೀಕರು ಸ್ಥಳಕ್ಕೆ ಬಂದಾಗ ಕಳ್ಳರ ಕೃತ್ಯಕ್ಕೆ ಬಳಸಿದ ಎಲ್ಲಾ ಯಂತ್ರಗಳನ್ನು ಬಿಟ್ಟು ಓಡಿ ಹೋಗಿದ್ದಾರೆ ಎಂದು ತಿಳಿಸಿದರು. ಘಟನೆ ನಡೆದ ಸ್ಥಳಕ್ಕೆ ಬ್ಯಾಂಕ್ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದು, ನೆಲಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿಗೆ ರಾಜಧಾನಿ ಬೆಂಗಳೂರಿನಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಕಳ್ಳರಿಂದ ಸಾಕಷ್ಟು ಮಂದಿ ಹಾನಿಗೊಳಗಾಗಿದ್ದು, ಆಸ್ತಿ-ಪಾಸ್ತಿ ನಷ್ಟವಾಗಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶದ ಪೊಲೀಸ್ ಅಧಿಕಾರಿಗಳು ಕಳ್ಳತನದ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಂಡು ಇಂತಹ ಪ್ರಕರಣಗಳು ಮರುಕಳಿಸದಂತೆ ಸೂಕ್ತ ಮತ್ತು ಕಟ್ಟುನಿಟ್ಟಿನ ಯೋಜನೆಗಳನ್ನು ರೂಪಿಸಬೇಕು ಎಂಬುದು ನಮ್ಮ ಕಾಳಜಿಯಾಗಿದೆ.

Latest Trending

Follow us on Instagram Bangalore Today Bangalore Today

Bhagirathi H P
Bhagirathi H P
Articles: 45

Leave a Reply

Your email address will not be published. Required fields are marked *