Bangalore: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಹೈಕೋರ್ಟ್ ಅಸ್ತು

Bangalore: ಬೆಂಗಳೂರಿನಲ್ಲಿ ನವೆಂಬರ್ 1 ರಿಂದ 3 ರವರೆಗೆ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಕನ್ನಡ ರಾಜ್ಯೋತ್ಸವವನ್ನು ಆಚರಿಸಲು ಅವಕಾಶ ನೀಡಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಈ ಕುರಿತು ಚಾಮರಾಜಪೇಟೆ ನಾಗರಿಕ ಒಕ್ಕೂಟ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತು ಮತ್ತು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮಂಗಳವಾರ ಆದೇಶವನ್ನು ಹೊರಡಿಸಿದೆ.

Bangalore

Bangalore, October, 31: ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ಕುರಿತು ಬೆಂಗಳೂರು ಜಿಲ್ಲಾಡಳಿತ ಮೊರೆ ಹೋಗಿದ್ದಂತಹ ನಾಗರಿಕ ಒಕ್ಕೂಟ ಸಾರ್ವಜನಿಕ ಹಿತಾಸಕ್ತಿ ಕೋರಿಕೆಯನ್ನು ಜಿಲ್ಲಾಧಿಕಾರಿಗಳು ಮನವಿ ತಿರಸ್ಕರಿಸಿದ್ದರು ಹಾಗಾಗಿ ಒಕ್ಕೂಟವು ನ್ಯಾಯಾಲಯದ ಮೂರೆ ಹೋಗಿದ್ದು ಇದೀಗ ಕನ್ನಡ ರಾಜ್ಯೋತ್ಸವ ಆಚರಣೆಗೆ ಮೂರು ದಿನಗಳ ಅವಕಾಶ ದೊರೆತಿದ್ದು ನವೆಂಬರ್ 1 ರಿಂದ 3 ರವರೆಗೆ ಸಾಂಸ್ಕೃತಿಕ ಚಟುವಟಿಕೆ ಮತ್ತು ಇತರೆ ಕಾರ್ಯಕ್ರಮಗಳನ್ನು ನಡೆಸಬೇಕು ಇದನ್ನು ಹೊರತುಪಡಿಸಿ ಅನಗತ್ಯ ಮತ್ತು ಕೋಮು ಗಲಭೆಗೆ ಕಾರಣವಾಗುವಂತ ಯಾವುದೇ ಕಾರ್ಯಕ್ರಮಗಳನ್ನು ಕೈಗೊಳ್ಳಬಾರದೆಂದು ಸ್ಪಷ್ಟವಾಗಿ ಕೋರ್ಟ್ ತಿಳಿಸಿದೆ.

ಇದನ್ನೂ ಓದಿ; ಬೆಂಗಳೂರಿನಲ್ಲಿ ಈರುಳ್ಳಿ ಬೆಲೆ 90 ರೂ.ಗೆ ತಲುಪಿದ್ದು, ಮತ್ತಷ್ಟು ಏರಿಕೆಯಾಗುವ ಸಾಧ್ಯತೆ

ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನ ಹಲವು ವಿವಾದಗಳಿಗೆ ಹೆಸರಾಗಿದ್ದು, ಇದೀಗ ಕನ್ನಡ ರಾಜ್ಯೋತ್ಸವ ಆಚರಿಸುವಂತೆ ಚಾಮರಾಜಪೇಟೆ ನಾಗರಿಕ ಒಕ್ಕೂಟ ಸಾರ್ವಜನಿಕ ಹಿತಾಸಕ್ತಿ ಮನವಿಗೆ ಕೋರ್ಟ್ ಅನುಮತಿಯನ್ನು ನೀಡಿದೆ, ಕನ್ನಡ ರಾಜ್ಯೋತ್ಸವದ ನಿಮಿತ್ತ ಹಲವು ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಇದಕ್ಕೂ ಮುನ್ನ ಗಣೇಶ ಚತುರ್ಥಿ ಹಾಗೂ ಸ್ವಾತಂತ್ರ್ಯ ದಿನಾಚರಣೆಯಂದು ಹಿಂದೂಪರ ಸಂಘಟನೆಗಳು ಒತ್ತಾಯಿಸುತ್ತಿದ್ದು, ಪರ-ವಿರೋಧಗಳು ಜೋರಾಗಿ ಕೇಳಿಬಂದಿದ್ದು, ಕನ್ನಡ ಸಾಹಿತ್ಯ ಪರಿಷತ್ತು ಕೂಡ ಈದ್ಗಾ ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವಂತೆ ಒತ್ತಡ ಹೇರಿತ್ತು, ಈ ಎಲ್ಲಾ ಬೆಳವಣಿಗೆಯು ಚಾಮರಾಜಪೇಟೆ ನಾಗರೀಕರ ಒಕ್ಕೂಟ ಸಾರ್ವಜನಿಕ ಹಿತಾಸಕ್ತಿಗೆ ಅರ್ಜಿಯನ್ನು ಸಲ್ಲಿಸಲು ಪ್ರೇರೇಪಣೆಯನ್ನು ಮಾಡಿತು.

ಇದನ್ನೂ ಓದಿ; ಬೆಂಗಳೂರಿಗರೇ ಎಚ್ಚರ! 3 ದಿನಗಳಿಂದ ನಗರದಲ್ಲಿ ಚಿರತೆಯೊಂದು ಬೀಡುಬಿಟ್ಟಿದೆ.

ಕನ್ನಡ ರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ಚಾಮರಾಜಪೇಟೆ ನಾಗರೀಕರ ಒಕ್ಕೂಟ ಸಾರ್ವಜನಿಕ ಹಿತಾಸಕ್ತಿ ಸಂಘವು ಮೊದಲಿಗೆ ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿದ್ದು, ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಅವರ ಮನವಿಯನ್ನು ತಿರಸ್ಕರಿಸಿದ್ದರಿಂದ ಚಾಮರಾಜಪೇಟೆ ನಾಗರೀಕರ ಒಕ್ಕೂಟ ಸಾರ್ವಜನಿಕ ಹಿತಾಸಕ್ತಿ ಸಂಘವು ನ್ಯಾಯಾಲಯದ ಮೆಟ್ಟಿಲೇರಿದ್ದು, ಕೊನೆಗೂ ಅನುಮತಿ ಪಡೆದುಕೊಂಡಿದೆ.

ಈ ವೇಳೆ ಅರ್ಜಿದಾರರು ರಾಜ್ಯ ಧ್ವಜವನ್ನು ಮಾತ್ರ ಹಾರಿಸಲಾಗುವುದು ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ನೀಡಬೇಕು ಎಂದು ಚಾಮರಾಜಪೇಟೆ ನಾಗರಿಕರ ಸಂಘದಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿತ್ತು. ಹೈಕೋರ್ಟ್ ಅರ್ಜಿಯ ವಿಚಾರಣೆ ನಡೆಸಿ ಆದೇಶ ಪ್ರಕಟಿಸಿದೆ.

Latest Trending

Follow us on Instagram Bangalore Today

Leave a Reply

Your email address will not be published. Required fields are marked *