Bengaluru Traffic: ಬೆಂಗಳೂರಿನ ಟ್ರಾಫಿಕ್ ಪೊಲೀಸರು ದಟ್ಟಣೆ ನಿಭಾಯಿಸಲು IISc, NMIT ಜೊತೆ ಒಪ್ಪಂದ; ಬರಲಿದೆ Ai ಪರಿಹಾರ!

Bengaluru Traffic: ಬೆಂಗಳೂರು ಮಹಾನಗರದಲ್ಲಿ ಸಂಚಾರ ದಟ್ಟಣೆಯನ್ನು ನಿಭಾಯಿಸುವುದು ಬೆಂಗಳೂರು ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಇದೀಗ ನಗರ ಪೊಲೀಸರು ನಗರದ ಟ್ರಾಫಿಕ್ ಡೇಟಾವನ್ನು ವಿಶ್ಲೇಷಿಸುವ ಮೂಲಕ ನಗರದ ಸುರಕ್ಷತೆಯನ್ನು ಹೆಚ್ಚಿಸಲು IIT, IISc ಮತ್ತು NMIT ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ನಗರದ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಹೊಸ ತಂತ್ರಜ್ಞಾನಗಳನ್ನು ಅಳವಡಿಸಲು ಬೆಂಗಳೂರು ಟ್ರಾಫಿಕ್ ಪೊಲೀಸರು (IISc) ಭಾರತೀಯ ವಿಜ್ಞಾನ ಸಂಸ್ಥೆ ಮತ್ತು (NMIT) ನಿಟ್ಟೆ ಮೀನಾಕ್ಷಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯೊಂದಿಗೆ ಪ್ರತ್ಯೇಕ ತಿಳುವಳಿಕಾ ಒಪ್ಪಂದಗಳಿಗೆ ಸಹಿ ಹಾಕಿದೆ.

Bengaluru Traffic

ಬೆಂಗಳೂರು; ಬೆಂಗಳೂರು ದೇಶದ ಅತ್ಯಂತ ಜನದಟ್ಟಣೆಯ ನಗರಗಳಲ್ಲಿ ಒಂದಾಗಿದೆ ಮತ್ತು ನಗರದಲ್ಲಿ ಸಂಚಾರ ದಟ್ಟಣೆಯನ್ನು ಸುಧಾರಿಸಲು ಬೆಂಗಳೂರು ಪೊಲೀಸರು ಸೂಕ್ತ ಮಾರ್ಗವನ್ನು ಕಂಡುಕೊಳ್ಳುವಲ್ಲಿ ವಿಫಲರಾಗಿದ್ದಾರೆ, ಆದ್ದರಿಂದ ಇದೀಗ, ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ನಿಟ್ಟೆ ಮೀನಾಕ್ಷಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಸಹಯೋಗದೊಂದಿಗೆ (Ai) ಚಾಲಿತ ಪರಿಹಾರಗಳು ಮತ್ತು ಕೇಂದ್ರೀಕೃತ ತಂತ್ರಜ್ಞಾನ ಅನುಷ್ಠಾನದ ಮೂಲಕ ನಗರದ ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು, ಬೆಂಗಳೂರು ಟ್ರಾಫಿಕ್ ಪೊಲೀಸರು ಈ ಸಂಸ್ಥೆಗಳೊಂದಿಗೆ ಪ್ರತ್ಯೇಕ ಎಂಒಯುಗಳಿಗೆ ಸಹಿ ಹಾಕಿದ್ದಾರೆ.

ಇದನ್ನೂ ಓದಿ: ಕರ್ನಾಟಕಕ್ಕೆ KSRTC ಹೆಸರು ಬಳಕೆಗೆ ಮದ್ರಾಸ್ ಹೈಕೋರ್ಟ್ ನಿಂದ ಗ್ರೀನ್ ಸಿಗ್ನಲ್, ಕೇರಳ ರಾಜ್ಯ ಸಾರಿಗೆ ಸಲ್ಲಿಸಿದ ಅರ್ಜಿ ವಜಾ!

ಬೆಂಗಳೂರು ಪೊಲೀಸರು ಮತ್ತು IISc, NMIT ನಡುವಿನ ಒಪ್ಪಂದವೇನು?

ಬೆಂಗಳೂರು ಟ್ರಾಫಿಕ್ ಪೋಲೀಸ್ ಮತ್ತು (IISc) ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಮತ್ತು (NMIT) ನಿಟ್ಟೆ ಮೀನಾಕ್ಷಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯೊಂದಿಗಿನ ಈ ಒಪ್ಪಂದವು ನಗರದ ಟ್ರಾಫಿಕ್ ಡೇಟಾವನ್ನು ಸೆರೆಹಿಡಿಯುವ ಮತ್ತು ಆ ಮೂಲಕ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿರುವ ಯೋಜನೆಯಾಗಿದೆ.

BTP ಟ್ರಾಫಿಕ್ ಡೇಟಾವನ್ನು ಒದಗಿಸುತ್ತದೆ ಮತ್ತು IISC ತಂತ್ರಜ್ಞಾನ ನಿರ್ವಹಣಾ ವ್ಯವಸ್ಥೆ ಮತ್ತು ಇತರ ತಂತ್ರಜ್ಞಾನ-ಚಾಲಿತ ಸಾಧನಗಳನ್ನು ಬಳಸಿಕೊಂಡು ಸಮಗ್ರ ವಿಶ್ಲೇಷಣೆಯನ್ನು ನಡೆಸುತ್ತದೆ ಮತ್ತು ಈ ಸಂಸ್ಥೆಗಳ ಸಹಯೋಗದ ಪ್ರಯತ್ನಗಳು ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಸಂಚಾರ ಸುರಕ್ಷತೆಯನ್ನು ಸುಧಾರಿಸಲು ಮತ್ತು ನಗರದಲ್ಲಿ ಮಾಲಿನ್ಯವನ್ನು ಕಡಿಮೆ ಮಾಡುವ, ಉತ್ಪಾದಕತೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಹೊಸ ಮಾರ್ಗಗಳನ್ನು ಕಂಡುಕೊಳ್ಳಲು ಸಹಾಯ ಮಾಡುತ್ತದೆ, ಹಾಗಾಗಿ ಈ ಒಂದು ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

ಇದನ್ನೂ ಓದಿ:  ಬೆಂಗಳೂರಿನ ಟೆಕ್ಕಿಯೊಬ್ಬರು OLX ನಲ್ಲಿ ಹಾಸಿಗೆ ಮಾರಲು ಹೋಗಿ 68 ಲಕ್ಷ ರೂ ಕಳೆದುಕೊಂಡಿದ್ದಾರೆ; ಹೇಗೆ ಎಂಬುವುದು ಆಶ್ಚರ್ಯಕರ!

ನಗರದಲ್ಲಿ ಸಂಚಾರ ದಟ್ಟಣೆ ತಗ್ಗಿಸಲು Ai ಬಳಕೆ!

ಇದೇ ಮೊದಲ ಬಾರಿಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (Ai) ಅನ್ನು ಬೆಂಗಳೂರು ನಗರದಲ್ಲಿ ಸಂಚಾರ ನಿರ್ವಹಣೆಗೆ ಬಳಸಲಾಗುತ್ತಿದೆ, ಇದು ಸಂಚಾರ ಸುರಕ್ಷತೆಯನ್ನು ಸುಧಾರಿಸಲು ಮತ್ತು ನಗರದಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಜೊತೆಗೆ ಸಂಚಾರ ಉಲ್ಲಂಘನೆ ಮತ್ತು ಸಂಬಂಧಿತ ಸಮಸ್ಯೆಗಳ ಮೇಲ್ವಿಚಾರಣೆ ಮತ್ತು ನಿಯಂತ್ರಣವನ್ನು ಒದಗಿಸುತ್ತದೆ.

Latest Trending

Follow us on Instagram Bangalore Today

Leave a Reply

Your email address will not be published. Required fields are marked *