Chikkamagaluru-Mangalore NH Block: ಚಿಕ್ಕಮಗಳೂರು- ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತ.

Chikkamagaluru-Mangalore NH Block: ರಾಜ್ಯದಾದ್ಯಂತ ಮಳೆ ಅಬ್ಬರ ಮುಂದುವರಿದಿದ್ದು ಕರಾವಳಿ ಕರ್ನಾಟಕ, ಮಲೆನಾಡು, ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ವರ್ಷಧಾರೆ ಸುರಿಯುತ್ತಿದೆ. ಚಿಕ್ಕಮಗಳೂರು ಹಾಗೂ ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು ಅವಾಂತರ ಸೃಷ್ಟಿಸಿದೆ. NH-73 ಸಂಚಾರ ಸಂಪೂರ್ಣ ಬಂದ್ ಆಗಿದೆ. ಇದಿಷ್ಟೇ ಅಲ್ಲ, ಮರ ಬಿದ್ದಿದ್ದರಿಂದ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ.

Chikkamagaluru-Mangalore NH Block

ಚಿಕ್ಕಮಗಳೂರು: ಕರಾವಳಿ ಕರ್ನಾಟಕದಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆಯು ಅನೇಕ ಅವಾಂತರಗಳನ್ನು ಸೃಷ್ಟಿಸಿದೆ..ವ್ಯಾಪಕ ನಾಶ ಮತ್ತು ಅವ್ಯವಸ್ಥೆಯನ್ನು ಉಂಟುಮಾಡಿದೆ.  ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಭಾರೀ ಗಾಳಿಗೆ ನೂರಾರು ಮರಗಳು ಧರೆಗುರುಳಿದ್ದು .  ಚಿಕ್ಕಮಗಳೂರು ಹಾಗೂ ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಮರಗಳು ಬಿದ್ದು ಅವಾಂತರವೇ ಆಗಿದೆ. NH-73 ಸಂಚಾರ ಸಂಪೂರ್ಣ ಬಂದ್‌ ಆಗಿದೆ. ಇದಿಷ್ಟೇ ಅಲ್ಲದೆ ಮರ ಬಿದ್ದಿದ್ದರಿಂದ ಕೆಲವೆಡೆ ವಿದ್ಯುತ್  ಸಂಪರ್ಕ ಕಡಿತಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಜೋಕಟ್ಟೆ ಬಳಿ ನಡೆದ ಅಪಘಾತದಲ್ಲಿ ಶೈಲೇಶ್ ಎಂಬ 17 ವರ್ಷದ ಬಾಲಕ ಸಾವನ್ನಪ್ಪಿದ ದುರಂತ ಸಂಭವಿಸಿದೆ.  ತಡೆಗೋಡೆ ಕುಸಿದು ಬಿದ್ದಿದ್ದು, ಆತನನ್ನು ನುಜ್ಜುಗುಜ್ಜುಗೊಳಿಸಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಳ್ಕೂರಿನಲ್ಲಿ ಮನೆ ಮೇಲೆ ಮರ ಬಿದ್ದು ಅಪಾರ ಹಾನಿಯಾಗಿದೆ. ಪರಿಣಾಮವಾಗಿ ಕುಟುಂಬಸ್ಥರು ಕಣ್ಣೀರು ಹಾಕುವಂತಾಗಿದೆ ಸಂತ್ರಸ್ತ ಕುಟುಂಬವು ತಮ್ಮ ನಷ್ಟಕ್ಕೆ ಪರಿಹಾರವನ್ನು ಕೋರಿದ್ದಾರೆ.

ಇದಿಷ್ಟೇ ಅಲ್ಲ, ಇನ್ನೊಂದು ಮನೆಯ ಮೇಲೆ ಅಡಕೆ ಮರಗಳು ಬಿದ್ದು ಅವಾಂತರ ಆಗಿದೆ. ಮರ ಬಿದ್ದಿದ್ದರಿಂದ ಮನೆಯ ಪಕ್ಕದಲ್ಲಿರೋ ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. ಮನೆಯ ಕಾಂಪೌಂಡ್ ಕೂಡ ನಾಶವಾಗಿದೆ.

ಇದನ್ನೂ ಓದಿ: ಬೆಂಗಳೂರು ನಮ್ಮ ಮೆಟ್ರೋ 2ನೇ ಹಂತದ ಯೋಜನೆ ವಿಳಂಬ: ಸರ್ಕಾರಕ್ಕೆ ಶೇ.52ರಷ್ಟು ಹೆಚ್ಚುವರಿ ವೆಚ್ಚದ ಬರೆ

ಹಾಸನ ಜಿಲ್ಲೆಯಲ್ಲಿ ಬಾರಿ ಮಳೆ

ಹಾಸನ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು,  ಬೇಲೂರು ತಾಲೂಕಿನ ಅರೇಹಳ್ಳಿ ಗ್ರಾಮದಲ್ಲಿ ಕೆರೆ ಏರಿ ಒಡೆದು ಭತ್ತದ ಸಸಿಗಳು ಕೊಚ್ಚಿ ಹೋಗಿದ್ದು, 12 ಎಕರೆಯಲ್ಲಿದ್ದ ಬೆಳೆ ನಾಶವಾಗಿ ಕೃಷಿ ಭೂಮಿಗೆ ವ್ಯಾಪಕ ಹಾನಿಯಾಗಿದೆ.ಸಂತ್ರಸ್ತ ರೈತರಾದ ಮಂಜಪ್ಪ, ಚಂದ್ರಗೌಡ, ಬಸವರಾಜು, ಸೀತಮ್ಮ, ಯು.ಎಂ.ಇಂದಿರಾ, ಯು.ಡಿ.ಮಂಜುನಾಥ್ ಸೇರಿದಂತೆ ರೈತರು ನಷ್ಟದಿಂದ ಕಂಗಾಲಾಗಿದ್ದಾರೆ.ಅತಿವೃಷ್ಟಿಯಿಂದ ಅಪಾರ ಪ್ರಮಾಣದ ಹಾನಿಯಾಗಿದೆ ಎಂದು ರೈತರು ತಮ್ಮ ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.  

ಭಾಗಮಂಡಲ-ತಲಕಾವೇರಿ ರಸ್ತೆ ಸಂಪರ್ಕ ಕಡಿತ

ದಕ್ಷಿಣ ಕೊಡಗಿನಲ್ಲಿ, ವಿಶೇಷವಾಗಿ ತಲಕಾವೇರಿ ಭಾಗದಲ್ಲಿ ಭಾರೀ ಮಳೆ ಮತ್ತು ಬಲವಾದ ಗಾಳಿಯಿಂದಾಗಿ ಭಾರೀ ಅವಾಂತರಗಳು ಉಂಟಾಗಿವೆ.  ಭಾಗಮಂಡಲ-ತಲಕಾವೇರಿ ರಸ್ತೆಯ ಕೋಲಿ ಅರಣ್ಯದ ಸಮೀಪ ಮರವೊಂದು ಬಿದ್ದು ರಸ್ತೆ ಸಂಪರ್ಕ ಕಡಿತವಾಗಿದೆ. ಸದ್ಯ ಅರಣ್ಯ ಇಲಾಖೆಯಿಂದ ಮರ ತೆರವು ಕಾರ್ಯಾಚರಣೆ ನಡೆಯುತ್ತಿದೆ..

ಭಾಗಮಂಡಲ-ತಲಕಾವೇರಿ..ದಕ್ಷಿಣ‌ ಕೊಡಗಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ‌ಯಾಗುತ್ತಿದ್ದು,ವಿರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಕುಟ್ಟ ಹಾಗೂ ಟಿ.ಶೆಟ್ಟಿಗೇರಿ ಕ್ಲಸ್ಟರ್‌ಗಳ ಶಾಲೆಗಳಿಗೆ ರಜೆ ಘೋಷಿಸಿದ್ದಾರೆ.

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಪಂಚಗಂಗಾ

ಬೆಳಗಾವಿಯ ಪಂಚಗಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ನದಿಯ ರೌದ್ರ ನರ್ತನದ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಗರಿಷ್ಠ ಸಾಮರ್ಥ್ಯ 43 ಅಡಿಲಿದ್ದು ಈಗಾಗಲೇ 42 ಅಡಿಗಳಷ್ಟು ಮಟ್ಟ ತಲುಪಿದೆ.   

ಏರುತ್ತಿರುವ ನೀರು ಈಗಾಗಲೇ ಕೊಲ್ಲಾಪುರ ಜಿಲ್ಲೆಯಲ್ಲಿ ವ್ಯಾಪಕ ಪ್ರವಾಹಕ್ಕೆ ಕಾರಣವಾಗಿದ್ದು, 81 ಸೇತುವೆಗಳು ಮುಳುಗಿವೆ. ಅಕ್ಕಪಕ್ಕದ ಜಮೀನುಗಳು ಜಲಾವೃತಗೊಂಡಿದ್ದು, ನದಿ ನೀರು ಹೆದ್ದಾರಿಗಳ ಮೇಲೆ ಹರಿಯುತ್ತಿದ್ದು, ವಾಹನ ಸವಾರರು ಎರಡು ಅಡಿಯಷ್ಟು ನೀರಿನ ಮೂಲಕ ವಾಹನ ಚಲಾಯಿಸುವಂತಾಗಿದೆ. ಕೊಲ್ಲಾಪುರ ಜಿಲ್ಲೆಯ ರಾಧಾನಗರ ಡ್ಯಾಮ್ ಶೇಕಡಾ 92ರಷ್ಟು ಭರ್ತಿಯಾಗಿದ್ದು ಯಾವುದೇ ಕ್ಷಣದಲ್ಲಿ ನೀರು ಹೊರಕ್ಕೆ ಬಿಡುವ ಸಾದ್ಯತೆ ಇದೆ. ನದಿ ತೀರದ ಜನರು ಆತಂಕದಲ್ಲಿಯೇ ದಿನ ಕಳೆಯುವಂತಾಗಿದೆ.

Latest Trending

Follow us on Instagram Bangalore Today

Leave a Reply

Your email address will not be published. Required fields are marked *