Free Hospitality: ಬಡವರು ಮತ್ತು ಶ್ರೀಮಂತರು ಎಂಬ ಯಾವುದೇ ತಾರತಮ್ಯ ಇಲ್ಲದೆ ಉತ್ತಮ ಆರೋಗ್ಯ ಸೇವೆ ನೀಡಬೇಕು; ಸಿದ್ದರಾಮಯ್ಯ

Free Hospitality: ರಾಜ್ಯದ ಜನರಿಗೆ ಉತ್ತಮ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ಧವಾಗಿದ್ದು ಜಯದೇವ ಆಸ್ಪತ್ರೆಯಲ್ಲಿ ಸಿಗುವ ಸೌಲಭ್ಯಗಳು ಎಲ್ಲಾ ಸರಕಾರಿ ಆಸ್ಪತ್ರೆಯಲ್ಲೂ ಸಿಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿಕೆ ಕೊಟ್ಟಿದ್ದಾರೆ.

Free Hospitality

ಗುರುವಾರ ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳು 262 ಆಧುನಿಕ ಜೀವ ರಕ್ಷಕ ಆಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿ ಸಿದ್ದರಾಮಯ್ಯನವರು ಮಾತನಾಡಿ ಬಡವರು ಮತ್ತು ಶ್ರೀಮಂತರು ಎಂಬ ಯಾವುದೇ ತಾರತಮ್ಯ ಇಲ್ಲದೆ ಉತ್ತಮ ಆರೋಗ್ಯ ಸೇವೆ ನೀಡಬೇಕು ಎಂದು ವೈದ್ಯ ಸಮೂಹಕ್ಕೆ ಮನವಿ ಮಾಡಿದ್ದಾರೆ ಚಿಕಿತ್ಸೆ ಸಿಗದೇ ಯಾರು ಪ್ರಾಣವನ್ನು ಕಳೆದುಕೊಳ್ಳಬಾರದೆಂದು ಆಂಬುಲೆನ್ಸ್ ಸೇವೆಗಳನ್ನು ಒದಗಿಸಲಾಗಿದೆ,

ರಾಜ್ಯದಲ್ಲಿ 840ಕ್ಕೂ ಹೆಚ್ಚು ಆಂಬುಲೆನ್ಸ್ ಗಳು ಅಗತ್ಯವಿರುವುದರಿಂದ ಪ್ರತಿ ತಾಲೂಕಿಗೆ ನಾಲ್ಕು ಆಂಬುಲೆನ್ಸ್ ಕಾರ್ಯನಿರ್ವಹಿಸುತ್ತಿದ್ದು ಆರೋಗ್ಯ ಸೇವೆ ಒದಗಿಸುತ್ತಿದೆ ಎಂದು ವಿವರಿಸಿದ್ದರು .

ಇದನ್ನೂ ಓದಿ; ಕಾಡು ಪ್ರಾಣಿಗಳಿಂದ ಬೆಳೆಗಳನ್ನು ರಕ್ಷಿಸುವ ‘ಫಾರ್ಮ್ ಗಾರ್ಡ್’ ಉಪಕರಣ

ಬಡವರಿಗೆ ಖಾಸಗಿ ಡಯಾಗ್ನೋಸ್ಟಿಕ್ ಸೆಂಟರ್ ಗಳಲ್ಲಿ ಸೇವಾ ವೆಚ್ಚವನ್ನು ದುಬಾರಿ ಆಗಿರುವುದರಿಂದ ಪರಿಹಾರ ನಿಧಿಗೆ ಸಾವಿರಾರು ಅರ್ಜಿ ಕೊಡುತ್ತಿದ್ದಾರೆ, ಈ ಕಾರಣಗಳಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಉತ್ತಮ ಚಿಕಿತ್ಸೆಯನ್ನು ಸಿಗುವಂತಹ ವಾತಾವರಣವನ್ನು ಸೃಷ್ಟಿಸಲಾಗುತ್ತಿದೆ”, ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಚಾಲಕರುಗಳಿಗೆ ಹೊಣೆಗಾರಿಕೆ ನೀಡಬೇಕು, ಆಂಬುಲೆನ್ಸ್ ಗಳಿಗೆ ಜಿಪಿಎಸ್ ಅಳವಡಿಸಬೇಕು ಎಲ್ಲಾ ಅನುಕೂಲಗಳನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಒದಗಿಸಬೇಕು ಎಂದು ವಿಚಾರವನ್ನು ಅಧಿಕಾರಿಗಳು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಹೇಳಿಕೆ ಕೊಟ್ಟಿದ್ದಾರೆ.

188 ಇಂದಿರಾ ಕ್ಯಾಂಟೀನ್ ಸ್ಥಾಪನೆ!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಸಕರ ಭವನದ ಆವರಣದಲ್ಲಿ ಸುದ್ದಿಗಾರರ ಜೊತೆ ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿ ಆಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುತ್ತದೆ ಎಂದು ಹೇಳಿಕೆ ನೀಡಿದ್ದಾರೆ.ಬೆಂಗಳೂರಿನಲ್ಲಿ 225 ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ಅನ್ನು ಪ್ರಾರಂಭಿಸಿ ಅಗತ್ಯ ಇರುವ ಕಡೆಯೂ ಕ್ಯಾಂಟೀನ್ ಅನ್ನು ಆರಂಭಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.

Latest Trending

Follow us on Instagram Bangalore Today Bangalore Today

Bhagirathi H P
Bhagirathi H P
Articles: 46

Leave a Reply

Your email address will not be published. Required fields are marked *