Karnataka Rain: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಕಾರಣ ಹಲವೆಡೆ ಶಾಲಾ-ಕಾಲೇಜುಗಳಿಗೆ ರಜೆ

Karnataka Rain: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಹಿನ್ನೆಲೆ ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ಅವರು ಮುಂದಿನ ಐದು ದಿನಗಳ‌ ಹವಾಮಾನ ಮುನ್ಸೂಚನೆ ನೀಡಿದ್ದಾರೆ. ಕರಾವಳಿ ಸಮುದ್ರ ತೀರದಲ್ಲಿ ಗಾಳಿ ಪರಿವರ್ತನೆ ಹಿನ್ನಲೆ ಆಗಸ್ಟ್ 6ರ ವರೆಗೆ ವ್ಯಾಪಕ ಮಳೆ ಆಗಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದ್ದು, 

ಶಾಲಾ ಮಕ್ಕಳಿಗೆ ಶಾಲೆಗೆ ತೆರಳಲು ಅನಾನುಕೂಲವಾಗುವುದರ ಜೊತೆಗೆ ಅವಘಡಗಳು ಸಂಭವಿಸುವ ಇಡೀಸಾಧ್ಯತೆಯಿರುವುದರಿಂದ ಇಂದು (ಆ. 03) ಜಿಲ್ಲೆಯ 9 ತಾಲೂಕುಗಳಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Karnataka Rain

ಉತ್ತರ ಕನ್ನಡ: ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಮುಂದುವರಿದಿದೆದ್ದು,ಇನ್ನು ನಿನ್ನೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ಹೀಗಾಗಿ ಭಾರಿ ಮಳೆಯಿಂದ ನದಿ, ಹಳ್ಳ-ಕೊಳ್ಳಗಳು ತುಂಬಿದ್ದು, ಶಾಲಾ ಮಕ್ಕಳಿಗೆ ಶಾಲೆಗೆ ತೆರಳಲು ಅನಾನುಕೂಲವಾಗುವುದರ ಜೊತೆಗೆ ಅವಘಡಗಳು ಸಂಭವಿಸುವ ಸಾಧ್ಯತೆಯಿರುವುದರಿಂದ  ಜಿಲ್ಲೆಯ 9 ತಾಲೂಕುಗಳಲ್ಲಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

ಮಳೆಯ ಪ್ರಮಾಣ

  • ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಅತಿ ಭಾರೀ ಮಳೆ ಹಿನ್ನಲೆಯಲ್ಲಿ ಆಗಸ್ಟ್ 3,4 ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ
  • ದಕ್ಷಿಣ ಕನ್ನಡ ಜಿಲ್ಲೆಯ ಮಣಿ 19 ಸೆ.ಮೀ ಮಳೆಯಾಗಿದೆ.
  • ಪುತ್ತೂರಿನಲ್ಲಿ 16 ಸೆ.ಮೀ ಮಳೆಯಾಗಿದೆ.  
  • ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ  ಅತ್ಯಂತ ಭಾರೀ ಮಳೆ ಹಿನ್ನಲೆಯಲ್ಲಿ ಆಗಸ್ಟ್ 4ರ ವರೆಗೆ ಆರೆಂಜ್ ಹಾಗೂ 5, 6 ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಅಗಷ್ಟ 6 ರ ವರೆಗೆ ಮಳೆ‌ಯಾಗಲಿದೆ.ಉಳಿದಂತೆ ಬೆಂಗಳೂರಿನಲ್ಲಿ ಇಂದಿನಿಂದ ಆಗಸ್ಟ್ 6ರ ವರೆಗೆ ಹಲವೆಡೆ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ ಇದೇ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಅತಿ ವೇಗಕ್ಕೆ ಬ್ರೇಕ್ – ರಾತ್ರಿ ವೇಳೆ ಬೈಕ್ ಸಂಚಾರಕ್ಕೆ ನಿರ್ಬಂಧ

ಯಾವ್ಯಾವ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ

ಹೆಚ್ಚಿನ ಮಳೆಯಾಗುತ್ತಿರುವುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ, ದಾಂಡೇಲಿ, ಶಿರಸಿ ಹಾಗೂ ಸಿದ್ದಾಪೂರ ತಾಲ್ಲೂಕಿನ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿ, ಐ.ಟಿ.ಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ (ಆ.03) ರಜೆ ಘೋಷಿಸಲಾಗಿದೆ.ಜನ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಶಿರಾಡಿ ಘಾಟ್ ರಸ್ತೆಯಲ್ಲಿ ಪದೇ ಪದೇ ಭೂಕುಸಿತ ಮತ್ತು ಗುಡ್ಡ ಕುಸಿತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೀಡಿತ ಪ್ರದೇಶಕ್ಕೆ ತುರ್ತು ಭೇಟಿ ನೀಡಿದ್ದಾರೆ.

ಸಕಲೇಶಪುರ ತಾಲ್ಲೂಕು ದೊಡ್ಡ ತಪ್ಪಲೆಗೆ ಆಗಮಿಸಲಿರೋ ಸಿಎಂ, ಘಾಟ್‌ನ ಗುಡ್ಡ ಕುಸಿತ‌ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಲಿದ್ದಾರೆ. ಗುಡ್ಡದಡಿ ಅನೇಕ ವಾಹನಗಳು ಸಿಲುಕಿದ್ದು ತೆರವು ಕಾರ್ಯ ಮುಂದುವರಿದಿದೆ.

Latest Trending

Follow us on Instagram Bangalore Today

Leave a Reply

Your email address will not be published. Required fields are marked *