Karnataka Rain Forecast: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಲಿದೆ; ಹವಾಮಾನ ಇಲಾಖೆ ವರದಿ

Karnataka Rain Forecast: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದ್ದು, ಇಂದು ಮತ್ತು ನಾಳೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮತ್ತು ಉತ್ತರ ಕರ್ನಾಟಕದ ಭಾಗದಲ್ಲಿ ಮಾತ್ರ ಅಲ್ಪ ಪ್ರಮಾಣದ ಮಳೆಯಾಗಲಿದೆ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ , ಕೊಪ್ಪಳ, ರಾಯಚೂರು, ಯಾದಗಿರಿ, ಈ ಸ್ಥಳಗಳನ್ನು ಹೊರೆತುಪಡಿಸಿ ಉಳಿದೆಡೆ ಒಣಹವೆ ಇರಲಿದೆ ಎಂದು ತಿಳಿಸಿದ್ದಾರೆ.

Karnataka Rain Forecast

Bengaluru, Dec, 06: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ ಒಣ ಹವೆ ಆರಂಭವಾಗಲಿದ್ದು, ಕೆಲ ಜಿಲ್ಲೆಗಳಲ್ಲಿ ಚಳಿ ಆರಂಭವಾಗಲಿದ್ದು, ಮೋಡ ಕವಿದ ವಾತಾವರಣ ಕಂಡುಬರಲಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಉಡುಪಿ, ಉತ್ತರ ಕನ್ನಡದಲ್ಲಿ ಸದ್ಯ ಒಣಹವೆ ಇದ್ದು, ಶನಿವಾರ, ಭಾನುವಾರ ಮತ್ತು ಸೋಮವಾರ ಲಘು ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯದ ಸಮತಟ್ಟಾದ ಪ್ರದೇಶವಾದ ವಿಜಯಪುರದಲ್ಲಿ ಅತಿ ಕಡಿಮೆ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಜ್ಞ ಪ್ರಸಾದ್ ತಿಳಿಸಿದ್ದಾರೆ.

ಇದನ್ನೂ ಓದಿ;  ಚಿನ್ನ & ಬೆಳ್ಳಿ ದರ ಎಷ್ಟಿದೆ ನೋಡಿ!

ಇದಲ್ಲದೇ, ದಕ್ಷಿಣ ಒಳನಾಡಿನಲ್ಲೂ ನಾಲ್ಕು ದಿನ ಮಳೆಯಾಗುವ ಮುನ್ಸೂಚನೆಯಿದ್ದು, ಬೆಂಗಳೂರು, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಲಘು ಮಳೆಯಾಗುವ ಮುನ್ಸೂಚನೆ ಇದೆ. ಡಿಸೆಂಬರ್ 9 ಮತ್ತು 10 ರಂದು ಸಹ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿಯೂ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಹೆಚ್ಚಿದ್ದು, ಕೆಲವೆಡೆ ಮಂಜು ಕವಿದಿರುವ ಸಾಧ್ಯತೆ ಹೆಚ್ಚಿದ್ದು, ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್‌ ಆಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಳಗಾವಿ, ಬಾಗಲಕೋಟ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಉತ್ತರ ವಳನಾಡಿನಲ್ಲಿ ಲಘು ಮಳೆಯಾಗುವ ಸಾಧ್ಯತೆ ಕಡಿಮೆ ಇದ್ದು, ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

Latest Trending

Follow us on Instagram Bangalore Today Bangalore Today

Bhagirathi H P
Bhagirathi H P
Articles: 46

Leave a Reply

Your email address will not be published. Required fields are marked *