Karnataka Weather Forecast: ರಾಜ್ಯದ ಹಲವೆಡೆ ಮಳೆ ಸಾಧ್ಯತೆ, ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ನೋಡಿ!

Karnataka Weather Forecast: ಈಗಾಗಲೇ ಕರ್ನಾಟಕದಾದ್ಯಂತ ಡಿಸೆಂಬರ್ ತಿಂಗಳಿನಲ್ಲಿ ಚಳಿಯಾಗುತ್ತಿದ್ದು, ಮತ್ತೊಂದೆಡೆ ಮೋಡ ಕವಿದ ವಾತಾವರಣವನ್ನು ಗಮನಿಸಬಹುದು, ಹಾಗಾಗಿ ಇಂದಿನಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಾಗೂ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

Karnataka Weather Forecast

ಬೆಂಗಳೂರು, ಡಿ.12: ರಾಜ್ಯಾದ್ಯಂತ ಈಗಾಗಲೇ ಚಳಿಯ ವಾತಾವರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನವರಿ ಅಂತ್ಯದವರೆಗೂ ಇದೇ ರೀತಿ ಮುಂದುವರೆಯಲಿದ್ದು, ಬೆಳಗ್ಗೆ ಮತ್ತು ರಾತ್ರಿ ಚಳಿಯ ಪ್ರಮಾಣ ಕಂಡುಬಂದಿದ್ದು, ಇದಲ್ಲದೇ ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತ ಕಂಡಿದೆ, ಇಂದಿನ ದರ ಎಷ್ಟಿದೆ ನೋಡಿ!

ರಾಜ್ಯದ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ರಾಜ್ಯದ ಯಾವ್ಯಾವ ಭಾಗದಲ್ಲಿ ಮಳೆಯಾಗಲಿದೆ ಎಂಬ ಮಾಹಿತಿ ಈಗಾಗಲೇ ನೀಡಲಾಗಿದ್ದು, ಅದರ ಪ್ರಕಾರ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಅದಲ್ಲದೆ ಧರ್ಮಸ್ಥಳ, ಬೆಳ್ತಂಗಡಿ, ಮಾಣಿ, ಪಣಂಬೂರು, ಮೂಡಿಗೆರೆ, ಮಂಗಳೂರು ವಿಮಾನ ನಿಲ್ದಾಣ, ಸಿದ್ದಾಪುರ, ಹರದನಹಳ್ಳಿ, ಕುಶಾಲನಗರ ಭಾಗಗಳಲ್ಲಿ ಈಗಾಗಲೇ ಉತ್ತಮ ಮಳೆಯಾಗಿದೆ.

ಹೇಗಿದೆ ಬೆಂಗಳೂರು ಹವಾಮಾನ ವರದಿ!

ಬೆಂಗಳೂರಿನಲ್ಲಿ ಇಂದು ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮುಂಜಾನೆ ಮಂಜು ಮುಸುಕಿದ ವಾತಾವರಣ ಕಾಣುತ್ತಿದ್ದು, ನಗರದ ಎಚ್ಎಎಲ್ ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಇನ್ನಷ್ಟು ಗರಿಷ್ಠ ಉಷ್ಣಾಂಶ ದಾಖಲಾಗಿದೆ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಒಟ್ಟಾರೆ ನಗರದ ವಾತಾವರಣದಲ್ಲಿ ಗರಿಷ್ಠ ಉಷ್ಣಾಂಶ 29.0 ಡಿಗ್ರಿ ಸೆಲ್ಸಿಯಸ್ ತಲುಪಿದ್ದು ಕನಿಷ್ಠ 19.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಇದನ್ನೂ ಓದಿ: GKGS ಟ್ರಸ್ಟ್ ವತಿಯಿಂದ 12ನೇ ಕರುನಾಡ ಸಂಭ್ರಮಕ್ಕೆ ಕ್ಷಣಗಣನೆ, ರಮೇಶ್ ಅರವಿಂದ್ ಅವರಿಗೆ ಕನ್ನಡ ಕಲಾ ಭೂಷಣ ಪ್ರಶಸ್ತಿ

ರಾಜ್ಯದ 2 ಜಿಲ್ಲೆಗಳಲ್ಲಿ 14.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ!

ರಾಜ್ಯದ ವಿಜಯಪುರ ಮತ್ತು ಬೀದರ್ ನಲ್ಲಿ ಅತಿ ಕಡಿಮೆ ತಾಪಮಾನ ದಾಖಲಾಗಿದೆ. ಹೌದು, ರಾಜ್ಯದ ಅತಿ ಕಡಿಮೆ ತಾಪಮಾನ ಎಂದೇ ಹೆಸರಾಗಿರುವ ಈ ಎರಡು ಜಿಲ್ಲೆಗಳಲ್ಲಿ 14.0 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಕರಾವಳಿಯ ಹಲವೆಡೆ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದ್ದು, ಈಗಾಗಲೇ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗಿದೆ.

Latest Trending

Follow us on Instagram Bangalore Today Bangalore Today

Leave a Reply

Your email address will not be published. Required fields are marked *