Get flat 10% off on Wonderla Entry Tickets | Use coupon code "BTWONDER".
Karnataka Weather: ಮುಂದಿನ 3 ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ
Karnataka Weather Update: ಹವಾಮಾನ ವೈಪರೀತ್ಯದ ಪ್ರಭಾವದಿಂದ ಮುಂದಿನ ಮೂರು ದಿನಗಳ ಕಾಲ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಇಂದಿನಿಂದ ನವೆಂಬರ್ 5 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ವರದಿಯಾಗಿದೆ.
ಇಂದಿನಿಂದ ನ.5ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಗೂ ಕಲ್ಯಾಣ ಕರ್ನಾಟಕದಲ್ಲಿ ಬಿಸಿಲಿನ ಝಳ ಮುಂದುವರಿಯಲಿದೆ ಎಂದು ತಿಳಿಸಲಾಗಿದೆ.
ಇದನ್ನೂ ಓದಿ; 17.5 ಕೋಟಿ ಚುಚ್ಚುಮದ್ದು ಗಾಗಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ, ಯಾವುದು ಈ ಖಾಯಿಲೆ!
ತುಮಕೂರು, ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 2 ರಿಂದ ತಿಂಗಳು ಪೂರ್ತಿ ಮಳೆ ಸುರಿದರೂ ಅಚ್ಚರಿಯಿಲ್ಲ, ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಶಿವಮೊಗ್ಗ, ವಿಜಯನಗರ, ತುಮಕೂರು, ದಾವಣಗೆರೆ ಹಾಸನದಲ್ಲಿ ನವೆಂಬರ್ 7ರವರೆಗೆ ಮಳೆಯಾಗುವ ಸಾಧ್ಯತೆ ಇದೆ.
ಗಾಳಿಯ ವೇಗ ಗಂಟೆಗೆ 30 ರಿಂದ 40 ಕಿಲೋಮೀಟರ್ ಆಗುವ ಸಾಧ್ಯತೆಯಿದೆ ಮತ್ತು ಮುಂದಿನ 5 ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿನ್ನೆ ವರದಿ ಮಾಡಿದೆ.
ಕಡೂರು, ಜಯಪುರ, ತರೀಕೆರೆ, ಅಜ್ಜಾಪುರ, ಮಾಗಡಿ ಕೊಳ್ಳೇಗಾಲದಲ್ಲಿ ಮಳೆಯಾಗಿದೆ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಸೇರಿದಂತೆ ಇತರೆ ಜಿಲ್ಲೆಗಳಲ್ಲಿ ಆಗಾಗ್ಗೆ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆಕಸ್ಮಿಕವಾಗಿ ಮಳೆಯಾದರೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗುವ ಸಾಧ್ಯತೆ ಇದೆ. ಮಳೆಯಾದರೆ ಮಳೆಯಿಲ್ಲದೆ ಕಂಗಾಲಾಗಿದ್ದ ರೈತರಿಗೆ ಸ್ವಲ್ಪವಾದರೂ ನಿರಾಳವಾಗಬಹುದು ಎಂಬುದು ಹವಾಮಾನ ಇಲಾಖೆ ತಿಳಿಸಿದೆ.
Latest Trending
- “ಯಾವುದೇ ಕಾರನ್ನು ಆಯ್ಕೆಮಾಡಿ, ಅದನ್ನು ನಿಮಗೆ ಉಚಿತವಾಗಿ ಕೊಡುತ್ತೇನೆ “: ಆನಂದ್ ಮಹೀಂದ್ರ
- ಬಿಎಂಟಿಸಿಯ ಶೇ. 50% ರಷ್ಟು ಚಾಲಕರು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ: JICSR ವರದಿ
- ಬೆಂಗಳೂರಿಗರೇ ಎಚ್ಚರ! 3 ದಿನಗಳಿಂದ ನಗರದಲ್ಲಿ ಚಿರತೆಯೊಂದು ಬೀಡುಬಿಟ್ಟಿದೆ.
Follow us on Instagram Bangalore Today