Get flat 10% off on Wonderla Entry Tickets | Use coupon code "BTWONDER".
Bangalore Rain: ಮುಂದಿನ 5 ದಿನ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು KSNDMC ವರದಿ
Bangalore, Sept 07; ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆ ಆರಂಭವಾಗಿದ್ದು, ನಗರದ ಪ್ರಯಾಣಿಕರು ಮತ್ತು ವಾಹನ ಸವಾರರು ಪರದಾಡುವಂತಾಗಿದ್ದು, ಮುಂದಿನ 5 ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿ ಮಾಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರಸಕ್ತ ವರ್ಷ ಮಳೆ ಕೊರತೆಯಿಂದ 62 ತಾಲೂಕುಗಳು ಪ್ರಾಥಮಿಕ ಹಂತದಲ್ಲಿ ಬರಗಾಲಕ್ಕೆ ತುತ್ತಾಗುವ ವರದಿ ಬಂದಿದ್ದು, ರಾಜ್ಯ ರಾಜಧಾನಿಯಲ್ಲಿ ಮಾತ್ರ ವರುಣನ ಆರ್ಭಟ ಆರಂಭವಾಗಿದ್ದು, ನಗರದ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ನಗರದ ಮಧ್ಯ ಭಾಗದಲ್ಲಿ ಸುರಿದ ಮಳೆಯಿಂದಾಗಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಂಗಳವಾರ ಸಂಜೆಯಿಂದಲೇ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ನಗರದಲ್ಲಿ ಸಂಚಾರಕ್ಕೆ ಅಡ್ಡಿಯಾಗಿದೆ.
Also Read: ನಮ್ಮ ಮೆಟ್ರೋನ ವೈಟ್‌ಫೀಲ್ಡ್-ಚಲ್ಲಘಟ್ಟ ನೇರಳೆ ಮಾರ್ಗವು ಸೆ. 15 ರಿಂದ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತದೆ
ನಗರದ ಕೇಂದ್ರ ಭಾಗಗಳಾದ ಮೆಜೆಸ್ಟಿಕ್, ಎಂ.ಜಿ.ರಸ್ತೆ, ಶಿವಾಜಿನಗರ, ರಾಜಾಜಿನಗರ, ಕಬ್ಬನಪೇಟೆ, ಶೀರಾಂಪುರ, ಮಲ್ಲೇಶ್ವರ, ಬಸವನಗುಡಿ, ಬನಶಂಕರಿ, ಹೆಬ್ಬಾಳ, ಕೋರಮಂಗಲ, ಏರ್‌ಪೋರ್ಟ್ ರಸ್ತೆ, ಎಚ್‌ಎಎಲ್, ಆಡುಗೋಡಿ, ಬಿಟಿಎಂ, ಹಲಸೂರುಗಳಲ್ಲಿ ಕಳೆದ ಎರಡು ದಿನಗಳಿಂದ ಆಗಾಗ ಮಳೆ ಸುರಿಯುತ್ತಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರವು ಸೆಪ್ಟೆಂಬರ್ 5 ರಂದು ವಿವಿಧೆಡೆ ತುಂತುರು ಮಳೆಯಾಗಲಿದ್ದು, ರಾತ್ರಿ ವೇಳೆ ಮಳೆಯ ಆರ್ಭಟ ಜೋರಾಗಲಿದೆ, ಹವಾಮಾನ ಬದಲಾವಣೆಯಿಂದ ಮುಂಗಾರು ಮಳೆ ಚುರುಕಾಗಲಿದೆ ಎಂದು ವರದಿ ಮಾಡಿದೆ.
ಈ ಬಾರಿ ಸೆಪ್ಟೆಂಬರ್‌ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ!
ಆಗಸ್ಟ್ ತಿಂಗಳಿನಲ್ಲಿ ಮಳೆ ಕೊರತೆ ಎದುರಿಸಿದ್ದ ಬೆಂಗಳೂರು ನಗರದಲ್ಲಿ ಈಗ ಸೆಪ್ಟೆಂಬರ್ ಮೊದಲ ವಾರದಿಂದಲೇ ಭಾರೀ ಮಳೆಯಾಗುತ್ತಿದ್ದು, ಮಳೆಯ ಜೊತೆಗೆ ಚಳಿಯ ಪ್ರಮಾಣವೂ ಸಹ ಹೆಚ್ಚಾಗಿದೆ, ಹೀಗಾಗಿ ನಗರದಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಪ್ರತಿ ವರ್ಷ ಸೆಪ್ಟೆಂಬರ್‌ನಲ್ಲಿ 208 ಮಳೆಯಾಗುತ್ತಿದ್ದು, ಈ ಬಾರಿ ಬೆಂಗಳೂರಿನಲ್ಲಿ ಮೊದಲ ಐದು ದಿನಗಳಲ್ಲಿ 116.1 ಮಿ.ಮೀ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆ ಮತ್ತು ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.