Telengana New CM: ತೆಲಂಗಾಣದ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪಕ್ಷದ 12 ಮಂದಿ ಸಚಿವರೊಂದಿಗೆ ಪ್ರಮಾಣ ವಚನ ಸ್ವೀಕರಿಸಿದರು

Telengana New CM: ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಅವರು ಡಿಸೆಂಬರ್ 7 ಗುರುವಾರ ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಿದರು. ಅದ್ದೂರಿಯಾಗಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ರೇವಂತ್ ರೆಡ್ಡಿ ಹಾಗೂ 12 ಕಾಂಗ್ರೆಸ್ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Telengana New CM

ತೆಲಂಗಾಣ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, 119 ಸ್ಥಾನಗಳ ಪೈಕಿ 69 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದಿದೆ, ಹೀಗಾಗಿ ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿಯನ್ನು ಕಾಂಗ್ರೆಸ್ ಪಕ್ಷ ಆಯ್ಕೆ ಮಾಡಿದ್ದು.

ಹೈದರಾಬಾದ್‌, ಡಿ. 07: ಹೈದರಾಬಾದ್‌ನ ಎಲ್‌ಬಿ ಸ್ಟೇಡಿಯಂನಲ್ಲಿ ಗುರುವಾರ ನಡೆದ ಅದ್ಧೂರಿ ಸಮಾರಂಭದಲ್ಲಿ ತೆಲಂಗಾಣ ಕಾಂಗ್ರೆಸ್ ಅಧ್ಯಕ್ಷ ಅನುಮುಲಾ ರೇವಂತ್ ರೆಡ್ಡಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇದನ್ನೂ ಓದಿ;  ಮುಂದಿನ 1 ವಾರದಲ್ಲಿ ರೈತರ ಖಾತೆಗೆ ಮೊದಲ ಕಂತಿನ ಬೆಳೆ ಪರಿಹಾರ!

ಉತ್ತಮ್ ಕುಮಾರ್ ರೆಡ್ಡಿ, ಶ್ರೀಧರ್ ಬಾಬು, ಪೊನ್ನಂ ಪ್ರಭಾಕರ್, ಕೋಮಟಿ ರೆಡ್ಡಿ ವೆಂಕಟ್ ರೆಡ್ಡಿ, ದಾಮೋದರ ರಾಜನರಸಿಂಹ, ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ, ದಾನ ಅನಸೂಯ, ತುಮ್ಮಲ ನಾಗೇಶ್ವರ ರಾವ್, ಕೊಂಡ ಸುರೇಖಾ ಮತ್ತು ಜೂಪಲ್ಲಿ ಕೃಷ್ಣರಾವ್ ಅವರು ರೇವಂತ್ ರೆಡ್ಡಿ ಜೊತೆಗೆ ಪ್ರಮಾಣ ವಚನ ಸ್ವೀಕರಿಸುವ ಹನ್ನೆರಡು ಸಚಿವರಾಗಿದ್ದಾರೆ. ತೆಲಂಗಾಣದ ಉಪಮುಖ್ಯಮಂತ್ರಿಯಾಗಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರನ್ನು ನೇಮಿಸಲಾಯಿತು ಮತ್ತು ಅವರು ಸಚಿವರು ಮತ್ತು ಮುಖ್ಯಮಂತ್ರಿಗಳೊಂದಿಗೆ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ, ಕರ್ನಾಟಕ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಉಪಸ್ಥಿತರಿದ್ದರು.

ಯಾರು ರೇವಂತ್ ರೆಡ್ಡಿ?

ಪ್ರಸ್ತುತ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿರುವ ಅನುಮುಲ ರೇವಂತ್ ರೆಡ್ಡಿ ಅವರು ಮೂಲ ಆರೆಸ್ಸೆಸ್ ಮತ್ತು ಎಬಿವಿಪಿಯಿಂದ ರಾಜಕೀಯ ಕ್ಷೇತ್ರದಲ್ಲಿ ಹೆಚ್ಚಾಗಿ ಗುರುತಿಸಿಕೊಂಡಿದ್ದರು, ನಂತರ ರಾಜಕೀಯ ಪರಿಸ್ಥಿತಿಯಲ್ಲಿ ಬದಲಾದ ಕಾರಣ ರೇವಂತ್ ರೆಡ್ಡಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿ ಶ್ರಮಿಸಿದರು. ಆದ್ದರಿಂದ ಅವರು ರಾಜ್ಯದಲ್ಲಿ ಹೆಚ್ಚು ಚರ್ಚೆಗೆ ಒಳಗಾಗಿದ್ದರು.

Latest Trending

Follow us on Instagram Bangalore Today Bangalore Today

Leave a Reply

Your email address will not be published. Required fields are marked *